ಬಿಟ್ ಕಾಯಿನ್, ಡ್ರಗ್ಸ್ ದಂಧೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ – ಸಿಎಂ ಬಸವರಾಜ ಬೊಮ್ಮಾಯಿ. ಹುಬ್ಬಳ್ಳಿ,ಅಕ್ಟೋಬರ್,28,2021(..):ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಣೆ ಮಾಡುತ್ತಿರುವುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಿಟ್ ಕಾಯಿನ್ ,ಡ್ರಗ್ಸ್ ದಂಧೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಮ್ಮದೇ ಸರ್ಕಾರ ಈ ಪ್ರಕರಣವನ್ನು ಇಡಿ ಹಾಗೂ ಸಿಬಿಐ ತನಿಖೆಗೆ ವಹಿಸಿದೆ. ತನಿಖೆ ನಡೆಯುತ್ತಿದ್ದು, ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ತಿಳೀಸಿದರು. ರಾಜ್ಯ ಸರ್ಕಾರವು ಬಿಟ್ ಕಾಯಿನ್, ಡ್ರಗ್ ಕೇಸ್ ಪ್ರಕರಣ ಕುರಿತಂತೆ ಸಮಗ್ರ ತನಿಖೆಯನ್ನು ನಡೆಸಿದೆ. ಈ ತನಿಖೆಯ ಬಳಿಕವೇ ಇಡಿ ಹಾಗೂ ಸಿಬಿಐ ತನಿಖೆಗೆ ವಹಿಸಿದೆ. ಸಿದ್ದರಾಮಯ್ಯ ಕೂಡ ಒಬ್ಬ ಸಿಎಂ ಆಗಿದ್ದವರು. ಉಪ ಚುನಾವಣೆ ಸಲುವಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ನಾವು ಯಾರನ್ನು ರಕ್ಷಿಸುತ್ತಿಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : - – - – - -