ಐಸಿಸಿ ಟಿ-20 : ಕುಸಿದ ಕೊಯ್ಲಿ, ರಾಹುಲ್ ಬೆಂಗಳೂರು, ಅಕ್ಟೋಬರ್ 28, 2021 (..):ಐಸಿಸಿ ಪುರುಷರ ಟ್ವೆಂಟಿ-20 ಆಟಗಾರರ ಬಿಡುಗಡೆಯಾಗಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಒಂದು ಸ್ಥಾನ ಕಳೆದುಕೊಂಡು ಐದನೇ ಸ್ಥಾನಕ್ಕೆ ಇಳಿದಿದ್ದಾರೆ. ಕೆ. ಎಲ್. ರಾಹುಲ್ ಎರಡು ಸ್ಥಾನಗಳನ್ನು ಕಳೆದುಕೊಂಡಿದ್ದಾರೆ. ಈ ಮೂಲಕ ಎಂಟನೇ ಸ್ಥಾನದಲ್ಲಿದ್ದಾರೆ. ಟ್ವೆಂಟಿ-20 ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 49 ಎಸೆತಗಳಲ್ಲಿ 57 ರನ್ ಗಳಿಸಿದ್ದರು. ಪಾಕಿಸ್ತಾನದ ಆರಂಭಿಕ ಬ್ಯಾಟರ್ ಮುಹಮ್ಮದ್ ರಿಝ್ವಾನ್ ಮೂರು ಸ್ಥಾನಗಳನ್ನು ಗಳಿಸಿ ನಾಲ್ಕನೇ ಸ್ಥಾನಕ್ಕೆ ಏರಿದ್ದಾರೆ. ದಕ್ಷಿಣ ಆಫ್ರಿಕದ ಬ್ಯಾಟರ್ ಏಡನ್ ಮರ್ಕ್ರಾಮ್ 8 ಸ್ಥಾನಗಳಷ್ಟು ಮೇಲಕ್ಕೇರಿ 3ನೇ ಸ್ಥಾನ ಪಡೆದಿದ್ದಾರೆ. ಮೊದಲ ಸ್ಥಾನದಲ್ಲಿ ಇಂಗ್ಲೆಂಡ್‌ನ ಡೇವಿಡ್ ಮಲಾನ್ ಇದ್ದರೆ, ಎರಡನೇ ಸ್ಥಾನದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಝಮ್ ಇದ್ದಾರೆ.