ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರ ಬಂಧನ. ಬೆಂಗಳೂರು.ಅಕ್ಟೋಬರ್,28,2021(..):ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ಧ ಮೂವರನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಓಂ ಪ್ರಕಾಶ್, ಸತ್ಪಾಲ್ ಸಿಂಗ್, ಗೇವರ್ ಚಂದ್ ಬಂಧಿತ ಆರೋಪಿಗಳು. ಬಂಧಿತರಿಂದ 3.5 ಲಕ್ಷ ರೂ ಹಾಗೂ ಮೂರು ಮೊಬೈಲ್ ಗಳನ್ನ ವಶಕ್ಕೆ ಪಡೆಯಲಾಗಿದೆ. ಬಂಧಿತರು ವಿವಿಧ ಆ್ಯಪ್ ಗಳ ಮೂಲಕ ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಈ ಕುರಿತು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : – - – –-