ಪೆಗಾಸಸ್​’ ತಂತ್ರಾಂಶ ಗೂಢಾಚಾರಿಕೆ ಪ್ರಕರಣದಲ್ಲಿ ಸುಪ್ರಿಂಕೋರ್ಟ್ ಮಹತ್ವದ ತೀರ್ಮಾನ: ತನಿಖೆಗೆ ತಜ್ಞರ ಸಮಿತಿ ರಚನೆ. ನವದೆಹಲಿ,ಅಕ್ಟೋಬರ್,27,2021(..):ಪೆಗಾಸಸ್​’ ತಂತ್ರಾಂಶ ಗೂಢಾಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಮೂಲಕ ಸುಪ್ರೀಂ ಕೋರ್ಟ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್​ ನಿವೃತ್ತ ನ್ಯಾ. ನೇತೃತ್ವದ ಸಮಿತಿ ಪ್ರಕರಣದ ತನಿಖೆ ನಡೆಸಲಿದೆ. ಇದರ ವಿರುದ್ಧದ ಅರ್ಜಿ ತಿರಸ್ಕರಿಸಬೇಕೆಂಬ ಕೇಂದ್ರದ ವಾದ ಒಪ್ಪಲ್ಲ. ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ಕೊಟ್ಟಿದ್ದೇವೆ. ಸ್ವತಂತ್ರ ಸದಸ್ಯರನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶ ಎಂದು ಸಾರಿರುವ ಸುಪ್ರೀಂ ಕೋರ್ಟ್​ ಈ ಪ್ರಕರಣ ಆಧುನಿಕ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದೆ. ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ‘ಸುಪ್ರೀಂ’ ಪರಿಶೀಲಿಸಿದೆ. ಸಾಂವಿಧಾನಿಕ ಮೌಲ್ಯ ಎತ್ತಿ ಹಿಡಿಯಲು ನಮ್ಮ ಶ್ರಮ ಎಂದು ಸಿಜೆಐ ರಮಣ ಆದೇಶಿಸಿದ್ದಾರೆ. : - - –- – – – … : , 27, 2021 (..): ’ . . . . ’ . . , . .: / /