ಖರ್ಗೆ, ಪರಂ ಕಣ್ಣೀರಿನಲ್ಲಿ ಕಾಂಗ್ರೆಸ್ ಸರ್ವನಾಶ- ಸಿದ್ಧರಾಮಯ್ಯ ಮತ್ತು ಡಿಕೆಶಿ ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ. ಬಾಗಲಕೋಟೆ,ಅಕ್ಟೋಬರ್,27,2021(..):ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಗುತ್ತದೆ ಎಂದು ಹೇಳಿದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ನಳಿನ್ ಕುಮಾರ್ ಕಟೀಲ್, ಬಿಎಸ್ ವೈ ಕಣ್ಣೀರಿಗಿಂತ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಕಣ್ಣೀರು ಹೆಚ್ಚಿದೆ. ತನ್ನನ್ನ ಸಿಎಂ ಮಾಡಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಕಣ್ಣೀರು ಹಾಕುತ್ತಿದ್ದಾರೆ. ತನ್ನನ್ನ ಸೋಲಿಸಿದ್ದೀರಿ ಎಂದು ಜಿ.ಪರಮೇಶ್ವರ್ ಕಣ್ಣೀರು ಹಾಕುತ್ತಿದ್ದಾರೆ. ಹೀಗಾಗಿ ಖರ್ಗೆ ಮತ್ತು ಪರಂ ಕಣ್ಣೀರಿನಿಂದ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ ಎಂದರು. ಖರ್ಗೆ ಮತ್ತು ಪರಮೇಶ್ವರ್ ಬಗ್ಗೆ ಡಿಕೆ ಶಿವಕುಮಾರ್ ಗೆ ಚಿಂತೆ ಇಲ್ಲ. ಚಿಂತೆ ಇರೋದು ಸಿದ್ಧರಾಮಯ್ಯ ಬಗ್ಗೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಿಎಂ ಕುರ್ಚಿಗೆ ಟವಲ್ ಹಾಕಿ ಕುಳಿತಿದ್ದಾರೆ. ಸಿದ್ಧರಾಮಯ್ಯ ಸಿಎಂ ಆಗಲು ಡಿಕೆ ಶಿವಕುಮಾರ್ ಬಿಡಲ್ಲ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲು ಸಿದ್ಧರಾಮಯ್ಯ ಬಿಡಲ್ಲ. ಉಪ ಚುನಾವಣೆ ಬಳಿಕ ಕಾಂಗ್ರೆಸ್ ಎರಡು ಹೋಳಾಗುತ್ತದೆ ಎಂದು ನಳೀನ್ ಕುಮಾರ್ ಕಟೀಲ್ ಭವಿಷ್ಯ ನುಡಿದರು. : - -- --- … ‘ , ’ ’: , 27, 2021 (..): .. .. . .. ’ . , , “ . , . . .”, , “.. . . .. . ’ , ’ .. . ,” .: / / .. / /