ನಟ ಶಾರುಖ್ ಖಾನ್ ಪುತ್ರ ಆರ್ಯನ್ ಸೇರಿ 8 ಜನರಿಗೆ ನ್ಯಾಯಾಂಗ ಬಂಧನ ವಿಸ್ತರಣೆ. ಮುಂಬೈ,ಅಕ್ಟೋಬರ್,21,2021(..):ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ 8 ಆರೋಪಿಗಳಿಗೆ ವಿಧಿಸಿರುವ ನ್ಯಾಯಂಗ ಬಂಧನದ ಅವಧಿಯನ್ನು ಕೋರ್ಟ್ ವಿಸ್ತರಣೆ ಮಾಡಿದೆ. ನಿನ್ನೆಯಷ್ಟೇ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ಧ ಜಾಮೀನು ಅರ್ಜಿಯನ್ನ ಮುಂಬೈನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಇದೀಗ ಆರ್ಯನ್ ಖಾನ್ ಸೇರಿ 8 ಮಂದಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನ ಅಕ್ಟೋಬರ್ 30ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ಅಕ್ಟೋಬರ್ 30ರವರೆಗೆ ಆರ್ಯನ್ ಖಾನ್ ಗೆ ಜೈಲೇ ಗತಿ ಎನ್ನುವಂತಾಗಿದೆ. ಈ ಮಧ್ಯೆ ಬೆಳಿಗ್ಗೆ ನಟ ಶಾರೂಖ್ ಖಾನ್ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ನನ್ನ ಭೇಟಿಯಾಗಿ ಮಾತನಾಡಿದ್ದರು. ಇದಾದ ನಂತರ ಶಾರುಖ್ ಖಾನ್ ನಿವಾಸದ ಮೇಲೆ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದರು. : - - –