ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆ: ನಟ ದರ್ಶನ್ ಸೇರಿ ಆರೋಪಿಗಳು ಕೋರ್ಟ್ ಗೆ ಹಾಜರು ಬೆಂಗಳೂರು,ಜೂನ್,20,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ ಆರೋಪಿಗಳನ್ನ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ನಟ ದರ್ಶನ್ ಸೇರಿ ಆರೋಪಿಗಳನ್ನ ಹಾಜರುಪಡಿಸಲಾಗಿದೆ. ಇನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಹಾಲ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಎರಡು ಬಾರಿ ಆರೋಪಿಗಳನ್ನ ಕಸ್ಟಡಿಗೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಂದು ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾಗಿದ್ದು ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿದ್ದಾರೆಯೇ ? ಅಥವಾ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗುತ್ತದೆಯೇ ಕಾದು ನೋಡಬೇಕಿದೆ. : , , , ,