ಧಾರಾಕಾರ ಮಳೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ: ತ್ವರಿತವಾಗಿ ದುರಸ್ಥಿ ಕಾರ್ಯ ನಡೆಸಲು ಸಚಿವರಿಂದ ಸೂಚನೆ. ಮೈಸೂರು,ಅಕ್ಟೋಬರ್,21,2021(..):ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿದೆ. ದಸರಾ ದೀಪಾಲಂಕಾರ “ಸುಸ್ವಾಗತ”ವಿದ್ಯುತ್ ಬೋರ್ಡ್ ಸಮೀಪದಲ್ಲಿ ಈ ಘಟನೆ ನಡೆದಿದ್ದು ಪ್ರವಾಸಿಗರು ಹಾಗೂ ಭಕ್ತರು ಆ ರಸ್ತೆಯಲ್ಲಿ ಸಂಚರಿಸದಂತೆ ಮೈಸೂರು ನಗರ ಪೊಲೀಸ್ ಕಮಿಷನರ್‌ ಡಾ.ಚಂದ್ರಗುಪ್ತ ಸೂಚನೆ ನೀಡಿದ್ದಾರೆ. ಇನ್ನು ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರದ ಹಲವು ಕಡೆಗಳಲ್ಲಿ ರಸ್ತೆಗಳು ತುಂಬಿ ತುಳುಕಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಗರದ ಅಶೋಕ ರಸ್ತೆ, ದೊಡ್ಡ ಗಡಿಯಾದ ವೃತ್ತದಲ್ಲಿ ಮಳೆಯಿಂದಾಗಿ ದ್ವಿಚಕ್ರ ವಾಹನಗಳು ನೀರಿನಲ್ಲಿ ಮುಳುಗಿ ಅವುಗಳನ್ನ ಎಳೆಯಲು ಸವಾರರು ಪರದಾಡಿದ ಸ್ಥಿತಿ ಉಂಟಾಗಿತ್ತು. ಚಾಮುಂಡಿಬೆಟ್ಟಭೂಕುಸಿತದದುರಸ್ತಿಕಾರ್ಯತ್ವರಿತವಾಗಿನಡೆಸಲುಜಿಲ್ಲಾಧಿಕಾರಿಗಳಿಗೆಸಚಿವಎಸ್.ಟಿಸೋಮಶೇಖರ್ಸೂಚನೆ ಗುಡ್ಡ ಕುಸಿತದ ಬಗ್ಗೆ ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಟದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ. ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ, ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು.ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ. ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚನೆ ನೀಡಿದ್ದಾರೆ. : - – – - . … : - , 21, 2021 (..): . , . , . ‘’ . . . , . - . - . : / / /