ಮುಂದುವರೆದ ಟ್ವೀಟ್ ಸಮರ: ‘ಬೈಗಮಿ (ದ್ವಿಪತ್ನಿತ್ವ)’ ಪದ ಬಳಸಿ ಮಾಜಿ ಸಿಎಂ ಹೆಚ್.ಡಿಕೆಯನ್ನ ಟೀಕಿಸಿದ ಬಿಜೆಪಿ. ಬೆಂಗಳೂರು,ಅಕ್ಟೋಬರ್,20,2021(..):ಹಾನಗಲ್ ಸಿಂದಗಿ ಉಪಚುನಾವಣೆ ಸಮೀಪಿಸುತ್ತಿದ್ದು ಚುನಾವಣ ಕಣ ರಂಗೇರಿದೆ. ಈ ಮಧ್ಯೆ ಮೂರು ಪಕ್ಷಗಳ ಟ್ವಿಟ್ ಸಮರ, ಟಾಕ್ ವಾರ್ ಮುಂದುವರೆದಿದ್ದು ಇದೀಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಬೈಗಮಿ (ದ್ವಿಪತ್ನಿತ್ವ) ಪದ ಬಳಸಿ ರಾಜ್ಯ ಬಿಜೆಪಿ ಘಟಕ ಟಾಂಗ್ ನೀಡಿದೆ. ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಘಟಕ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಹೆಚ್.ಡಿಕೆ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ ಘಟಕ, ಈ ದೇಶದಲ್ಲಿ ಪ್ರಜ್ಞಾವಂತರು, ಬುದ್ಧಿವಂತರು ಎಂದು ಭ್ರಮಿಸಿಕೊಂಡವರು ಮಾಡುವ ಕೆಲವು ಪ್ರಜ್ಞಾಪೂರ್ವಕ ತಪ್ಪುಗಳೇನು ಗೊತ್ತೇ? ಅವುಗಳ ಪಟ್ಟಿಕೊಡುತ್ತೇವೆ, ಒಮ್ಮೆ ಕಣ್ಣಾಡಿಸಿ. ಅವೆಲ್ಲವೂ ಭಾರತೀಯ ದಂಡ ಸಂಹಿತೆಯ ಪ್ರಕಾರ ಅಪರಾಧವೂ ಹೌದು. ಸಿಗ್ನಲ್ ಜಂಪ್, ವಿಶ್ವಾಸ ದ್ರೋಹ (ಬ್ರೀಚ್ ಆಫ್ ಟ್ರಸ್ಟ್ ), ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಎಲ್ಲಕ್ಕಿಂತ ಮುಖ್ಯವಾಗಿ ಬೈಗಮಿ. ಬೇರೆಯವರ ತಪ್ಪುಗಳ ಬಗ್ಗೆ ಸದಾ ಆಡಿಕೊಳ್ಳುವ ಕುಮಾರಸ್ವಾಮಿಯವರೇ ಇದೆಲ್ಲದರ ಬಗ್ಗೆ ತುಂಬಾ ಜಾಗರೂಕರಾಗಿರಬೇಕಲ್ಲವೇ? ಎಂದು ಹೆಚ್.ಡಿ ಕುಮಾರಸ್ವಾಮಿ ಅವರನ್ನ ಬಿಜೆಪಿ ಕುಟುಕಿದೆ. : - - – . … : , 20, 2021 (..): . , , .. , . . , : “ , , , . . . , , ?”: / .. / /