ಕೆಟ್ಟು ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು. ವಿಜಯಪುರ,ಅಕ್ಟೋಬರ್,20,2021(..):ಕೆಟ್ಟು ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಹೊನಗಾನಹಳ್ಳಿ ರಾ.ಹೆ 50ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ಧ ಮೂವರು ಹಾಗೂ ಲಾರಿ ಚಾಲಕ ಮೃತಪಟ್ಟಿದ್ದಾರೆ. ವಿಜಯಪುರದ ವ್ಯಕ್ತಿ, ಮಹಿಳೆ ಮಗು ಸೇರಿ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –- - – -