ಸ್ತ್ರೀಯರ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದವಿಗೆ ಬಿತ್ತು ಧರ್ಮದೇಟು. ತುಮಕೂರು,ಅಕ್ಟೋಬರ್,19,2021(..):ಸ್ತ್ರೀಯರ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದವನಿಗೆ ಸಾರ್ವಜನಿಕರು ಗೂಸಾ ನೀಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ವಿಶ್ವ ಗುರು ಸ್ಕ್ಯಾನಿಂಗ್ ಸೆಂಟರ್​ ನಲ್ಲಿ ಈ ಘಟನೆ ನಡೆದಿದೆ. ಸ್ಕ್ಯಾನಿಂಗ್ ಸೆಂಟರ್​ನಲ್ಲಿ ಕೆಲಸ ಮಾಡ್ತಿದ್ದ ಹರೀಶ್​ ಎಂಬಾತನೇ ಈ ದುಷ್ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಚಾಮರಾಜನಗರ ಮೂಲದ ಹರೀಶ್​ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ಧ. ಈ ಮಧ್ಯೆ ಆತ ಸ್ಕ್ಯಾನಿಂಗ್ ಸೆಂಟರ್​ ನ ಟಾಯ್ಲೆಟ್​ ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಹರೀಶ್​, ಮೊಬೈಲ್​ ಇರಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ.. ಈ ಹಿನ್ನೆಲೆಯಲ್ಲಿ ಆತನಿಗೆ ಸಾರ್ವಜನಿಕರು ಮಹಿಳೆಯರು ಹಿಗ್ಗಾಮುಗ್ಗ ಥಳಿಸಿದ್ದು, ಇದೀಗ ಕಾಮುಕ ಹರೀಶ್ ನನ್ನ ಹೊಸಬಡಾವಣೆ ಠಾಣಾ ಪೊಲೀಸರ ವಶಕ್ಕೆ ನೀಡಲಾಗಿದೆ. : – - - –-