ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ರಥೋತ್ಸವ: ರಾಜವಂಶಸ್ಥರಿಂದ ವಿಶೇಷ ಪೂಜೆ ಸಲ್ಲಿಕೆ. ಮೈಸೂರು,ಅಕ್ಟೋಬರ್,19,2021(..):ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ನೆರವೇರಿತು. ತಾಯಿ ಚಾಮುಂಡೇಶ್ವರಿಗೆ ಸಿಂಹವಾಹಿನಿ ಅಲಂಕಾರ, ದೇವಾಲಯದ ತುಂಬೆಲ್ಲಾ ಪುಷ್ಪಾಲಂಕಾರ ಮಾಡಲಾಗಿತ್ತು. ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾ ಕೈಂಕರ್ಯ ಪ್ರಾರಂಭವಾಗಿದ್ದು, ತಾಯಿ ಚಾಮುಂಡೇಶ್ವರಿಗೆ ರಾಜವಂಶಸ್ಥರು ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ನಂತರ ತಾಯಿ ಚಾಮುಂಡೇಶ್ವರಿ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು. ಪ್ರತಿ ವರ್ಷವೂ ದಸರಾ ಬಳಿಕ ಬೆಟ್ಟದ ಜಾತ್ರೆ ನಡೆಯೋದು ವಾಡಿಕೆ. ಕೊರೋನಾ ಹಿನ್ನೆಲೆ ಈ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗತ್ತು. ಈ ರಥೋತ್ಸವದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ತ್ರಿಷಿಕಾ ಕುಮಾರಿ ಒಡೆಯರ್, ಶಾಸಕ ಎಲ್.ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. : - - – … : , 19, 2021 (..): . , . . . , ( ) . . , , . , , .: / /