ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರ ಕೈಬಿಟ್ಟ ಸರ್ಕಾರ: ಮುಂದಿನ ವರ್ಷದಿಂದ ಪುನಾರಂಭಿಸುವ ಬಗ್ಗೆ ಸಿಎಂ ಬೊಮ್ಮಾಯಿ ಘೋಷಣೆ. ಬೆಂಗಳೂರು, ಅಕ್ಟೋಬರ್,18,2021(..): ಮಂಡ್ಯ ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರವನ್ನು ಸರ್ಕಾರ ಕೈಬಿಟ್ಟಿದ್ದು, ಇದೀಗ ಮುಂದಿನ ವರ್ಷದಿಂದ ಕಾರ್ಖಾನೆ ಪುನಾರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಮೈ ಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. ಕೊನೆಗೂ ಮಂಡ್ಯ ಜನಪ್ರತಿನಿಧಿಗಳು ಮತ್ತು ರೈತರ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಖಾಸಗೀಕರಣ ನಿರ್ಧಾರದಿಂದ ತಾತ್ಕಾಲಿಕವಾಗಿ ಹಿಂದೆ ಸರಿಯಲಾಗಿದೆ. ಸಭೆ ಬಳಿಕ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮುಂದಿನ ವರ್ಷದಿಂದ ಕಬ್ಬು ನುರಿಸಲು ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗುವುದು. ಕಾರ್ಖಾನೆ ಪುನಃಶ್ಚೇತನಕ್ಕೆ ತಕ್ಷಣವೇ ತಜ್ಞರ ಸಮಿತಿ ನೇಮಕ ಮಾಡಲಾಗುವುದು. ಮೂರು ತಿಂಗಳಲ್ಲಿ ತಜ್ಞರ ಸಮಿತಿ ವರದಿ ನೀಡಲಿದೆ. ಕಾರ್ಖಾನೆಯ ಪುನಃಶ್ಚೇತನಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುವುದು. ಮುಂದಿನ ಮೂರು ತಿಂಗಳಲ್ಲಿ ಆಡಳಿತಾಧಿಕಾರಿ ನೇಮಕವಾಗಲಿದೆ, ಅಗತ್ಯ ಹಣ ಬಿಡುಗಡೆ ಹಾಗೂ ಬೇಕಾದ ಎಲ್ಲ ಯಂತ್ರೋಪಕರಣ ರಿಪೇರಿಗೆ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದರು. : - – – –- … . : , 18, 2021 (..): . . , . , ’ . , . “ . . , ,” .: / / /