ಸಿಎಂ ಬೊಮ್ಮಾಯಿ ಅವರಿಂದ ಬೆಂಗಳೂರು ಸಿಟಿ ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ. ಬೆಂಗಳೂರು,ಅಕ್ಟೋಬರ್,18,2021(..):ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ನಗರ ಪ್ರದಕ್ಷಿಣೆ ಹಾಕುತ್ತಿದ್ದು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ನಗರದಲ್ಲಿ ಭಾರಿಮಳೆಯಿಂದಾಗಿ ನೀರು ತುಂಬಿಕೊಂಡಿರುವ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡುತ್ತಿದ್ದಾರೆ. ಈ ಮಧ್ಯೆ ಎಚ್.ಎಸ್ ಆರ್ ಲೇಔಟ್ ಭಾಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು. ಈ ವೇಳೆ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಬೊಮ್ಮಾಯಿ, ಹಂತಹಂತವಾಗಿ ಸಮಸ್ಯೆಗಳನ್ನ ಬಗೆ ಹರಿಸುತ್ತೇವೆ ಎಂದು ಸ್ಥಳೀಯರಿಗೆ ಭರವಸೆ ನೀಡಿದರು. ಬಿಬಿಎಂಪಿ ಮತ್ತು ಜಲಮಂಡಳಿ ನಡುವೆ ಸಮನ್ವಯತೆ ಕೊರತೆ ಇದೆ. ಎಲ್ಲರನ್ನೂ ಕರೆದು ಮಾತನಾಡುತ್ತೇನೆ. ಮಂತ್ರಿ ಡೆವಲಪರ್ಸ್ ಒತ್ತುವರಿ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ. ಎನ್ ಜಿಟಿ ಆದೇಶ ನೀಡಿದೆ. ಅದರಂತೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. : –- – … : - , 18, 2021 (..): . - . . - . . “ . . . . ,” .: / / / -