ಮೈಸೂರು ದಸರಾ: ಶುಭಮೀನ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ. ಮೈಸೂರು,ಅಕ್ಟೋಬರ್,15,2021(..):ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಗಲು ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ಅರಮನೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಾಂಪ್ರದಾಯದಂತೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಶುಭ ಮೀನ ಲಗ್ನದಲ್ಲಿ ಜೋಡಿ ನಂದಿ ಧ್ವಜಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು. ಈ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅತ್ಯಂತ ಭಕ್ತಿ ಭಾವದಿಂದ ನಂದಿ ಧ್ವಜಕ್ಕೆ ಪೂಜೆ ಸಲ್ಲಿಕೆ ಮಾಡಿದ್ದೇನೆ. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುವೆ ಎಂದು ತಿಳಿಸಿದರು. : – - -.