ಹಿರಿಯ ನಟ ಜಿ.ಕೆ ಗೋವಿಂದರಾವ್ ಅವರ ನಿಧನಕ್ಕೆ ಸಿಎಂ ಬೊಮ್ಮಾಯಿ ಹಾಗೂ ಸಿದ್ಧರಾಮಯ್ಯ ಸಂತಾಪ. ಬೆಂಗಳೂರು,ಅಕ್ಟೋಬರ್,15,2021(..):ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿದಿದ್ದ ಪ್ರೊ.ಜಿ.ಕೆ ಗೋವಿಂದ ರಾವ್ ಅವರು , ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇನ್ನು ಟ್ವೀಟ್ ಮಾಡಿ ಜಿ.ಕೆ ಗೋವಿಂದರಾವ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ,”ಹಿರಿಯ ಲೇಖಕ, ಚಿಂತಕ,‌ ನಟ ಪ್ರೊ.ಜಿ.ಕೆ. ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ,” ಎಂದು ಹೇಳಿದ್ದಾರೆ. : - – - – - - …. .. : , , 15, 2021 (..): . .. . , . .. . - . “ . - ,” . , , . .. . “ -, , . , , ,” .: .. / / / /