ಅ.15 ರಂದು ಮೈಸೂರು ದಸರಾ ಜಂಬೂಸವಾರಿ: ಅರಮನೆ ಸುತ್ತಮುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಮೈಸೂರು,ಅಕ್ಟೋಬರ್,13,2021(..):ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆ ವಿಜಯದಶಮಿ ದಿನ ಅಕ್ಟೋಬರ್ 15 ರಂದು ನಡೆಯಲಿದ್ದು, ಸಕಲ ಸಿದ್ಧತೆ ಮಾಡಲಾಗುತ್ತಿದೆ. ಈ ಮಧ್ಯೆ ಜಂಬೂ ಸವಾರಿ ಮೆರವಣಿಗೆ ಉದ್ಘಾಟಿಸಲು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಮೈಸೂರಿಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದು ಇದಾದ ಬಳಿಕ ಸಂಜೆ 4.36 ಕ್ಕೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಸಂಜೆ 5 ರಿಂದ 5 .30ರ ಒಳಗೆ ಜಂಬೂಸವಾರಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದು ಅಂದು‌ ಮೈಸೂರಿನಲ್ಲೆ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಬೆಳಗ್ಗೆ 10ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರಿಗೆ ಸಿಎಂ ಬೊಮ್ಮಾಯಿ ಪ್ರಯಾಣ ಬೆಳೆಸಲಿದ್ದಾರೆ. ವಿಜಯದಶಮಿ ದಿನ ಅರಮನೆ ಸುತ್ತಮುತ್ತ ಬಿಗಿ ಪೋಲಿಸ್ ಬಂದೋಬಸ್ತ್ ವಿಜಯದಶಮಿ ದಿನ ಮೈಸೂರು ಅರಮನೆ ಸುತ್ತಮುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದ್ದು, ಅರಮನೆಯ ಸುತ್ತಲಿನ ರಸ್ತೆಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ನಾಳೆ ಪೋಲಿಸ್ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗುವುದು ಸಾರ್ವಜನಿಕರು ಸಹಕರಿಸುವಂತೆ ನಗರ ಪೋಲಿಸ್ ಆಯುಕ್ತ ಡಾ ಚಂದ್ರಗುಪ್ತ ಕೋರಿದ್ದಾರೆ. ಅರಮನೆ ಒಳಗಡೆ ಕೋರೋನಾ ನಿಯಮದ ಅಡಿಯಲ್ಲಿ ಸೂಕ್ತ ಭದ್ರತೆಯೊಂದಿಗೆ ಮೆರವಣಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಇವತ್ತಿನ ಅಂತಿಮ ಹಂತದ ರಿಹರ್ಸಲ್ ಯಶಸ್ವಿಯಾಗಿ ನಡೆದಿದೆ. ದಸರಾಗೆ ಬೇಕಾದ ಎಲ್ಲಾ ಸಿದ್ದತೆಗಳು ಮುಕ್ತಾಯವಾಗಿದೆ ಎಂದು ನಗರ ಪೋಲಿಸ್ ಆಯುಕ್ತ ಡಾ ಚಂದ್ರಗುಪ್ತ ಹೇಳಿದರು. : - –- 15th-- - … . 15: , 13, 2021 (..): - 15, . . . 1.00 4.36 . 5.00 5.30 . 10.00 . , . . . . .: / / / /