ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ‌ಎಲ್ಲಾ‌ ರೀತಿಯ ನೆರವು ನೀಡಲು ಸಿದ್ಧ-‌ಸಚಿವ ಮುರುಗೇಶ್‌ ಆರ್ ನಿರಾಣಿ‌. ಬೆಂಗಳೂರು, ಅಕ್ಟೋಬರ್ 12,2021(..):ಮಹಿಳೆಯರು ‌ ಸ್ವಂತ ಉದ್ಯಮಗಳನ್ನು ‌ಆರಂಭಿಸಲು ಮುಂದಾದರೆ ಸರ್ಕಾರದಿಂದ ‌ ಎಲ್ಲಾ ‌ರೀತಿಯ ನೆರವು ‌ನೀಡಲು‌ ಸಿದ್ದ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್‌ ಆರ್ ನಿರಾಣಿ‌ ಅವರು ಆಶ್ವಾಸನೆ ‌ನೀಡಿದರು. ಮಂಗಳವಾರ ಬೆಂಗಳೂರಿನ ‌ಅರಮನೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ನಡೆದ ‘ಕೈಗಾರಿಕಾ ‌ಆದಾಲತ್’ ಕಾರ್ಯಕ್ರಮದ ವೇಳೆ ‌ನವೆಂಬರ್ 18 ರಂದು ಅಂತರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದಂದು ನಡೆಯಲಿರುವ ‘ಟುಗೆದರ್ ವಿ ಗ್ರೋ’ ಕಾರ್ಯಕ್ರಮದ ‘ಕೈಪೀಡಿ’ ಬಿಡುಗಡೆ ಮಾಡುವ ಮೂಲಕ ಮಹಿಳಾ ಉದ್ಯಮಿಗಳಿಗೆ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದರು. ಪ್ರತಿಯೊಬ್ಬ ಮಹಿಳಾ ಉದ್ಯಮಿಗಳು ಸ್ವಾವಲಂಬನೆಯಾಗಬೇಕು ಎಂಬುದು ‌ನಮ್ಮ‌ಸರ್ಕಾರದ ಮುಖ್ಯ ‌ಗುರಿಯಾಗಿದೆ.ಕೇಂದ್ರ ಮತ್ತು ‌ರಾಜ್ಯಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ‌ಮಹಿಳಾ ಉದ್ಯಮಿಗಳ ಸಂಘಗಳ () ಒಕ್ಕೂಟದ ನಿಯೋಗದೊಂದಿಗೆ ಸಂವಾದ ನಡೆಸಿದ ಸಚಿವ ಮುರುಗೇಶ್ ನಿರಾಣಿ, ಅವರು, ಮಹಿಳಾ ಉದ್ಯಮಿಗಳಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ನಿಮ್ಮ ಉದ್ಯಮಕ್ಕೆ ‌ನಮ್ಮ ಇಲಾಖೆಯಿಂದ ‌ಏನೇನು ನೆರವು ಬೇಕೋ ಎಲ್ಲವನ್ನೂ ‌ಒದಗಿಸಲು‌ ಸಿದ್ದ ಎಂದು ‌ವಾಗ್ದಾನ‌ ಮಾಡಿದರು. “ನಮ್ಮ ಸರ್ಕಾರವು ಮಹಿಳೆಯರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಲು ಬದ್ಧವಾಗಿದೆ. ನಾವು ಮಹಿಳಾ ಉದ್ಯಮಿಗಳಿಗೆ ಸಹಕಾರ ಮತ್ತು ಬೆಂಬಲವನ್ನು ನೀಡುತ್ತೇವೆ. ಜೊತೆಗೆ ಅಗತ್ಯ ಮಾರ್ಗದರ್ಶನ ಮತ್ತು ಸಹಾಯವನ್ನು ನೀಡುತ್ತೇವೆ. ಮಹಿಳೆಯರನ್ನು ಸಬಲೀಕರಣಗೊಳಿಸುವುದು ಎಂದರೆ,ನಮ್ಮ ಸಮಾಜವನ್ನು ಬಲಗೊಳಿಸಿದಂತೆ ಎಂದು ನಾವು ಭಾವಿಸುತ್ತೇವೆ” ಎಂದರು. ಮಹಿಳಾ ಉದ್ದಿಮೆದಾರರ ಸಂಘಗಳ ಒಕ್ಕೂಟವು ‌ ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುವಲ್ಲಿ ಮತ್ತು ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯ ಮಾಡಿತ್ತೀರುವುದಕ್ಕೆ‌ ಯಶಸ್ವಿ ಕೈಗಾರಿಕೋದ್ಯಮಿಯೂ ಆಗಿರುವ ಸಚಿವ ಮುರುಗೇಶ್ ನಿರಾಣಿ, ರಾಜ್ಯವು ಅತ್ಯುತ್ತಮ ಅವಕಾಶಗಳನ್ನು ನೀಡುತ್ತದೆ. ಇದು ಉಪಯೋಗವಾದರೆ ಮಾತ್ರ ಸಾರ್ಥಕವಾಗುತ್ತದೆ ಎಂದು ‌ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ನೇತೃತ್ವದ ಅನ್ನು ನಾನು ಅಭಿನಂದಿಸುತ್ತೇನೆ, ಮಹಿಳೆಯರಲ್ಲಿ ಉದ್ಯಮಶೀಲತೆಯ ಮನೋಭಾವವನ್ನು ಪ್ರೋತ್ಸಾಹಿಸಿದ್ದಕ್ಕಾಗಿ, ಅವರು ಯಶಸ್ಸನ್ನು ಸಾಧಿಸಲು ಸಹಾಯ ಮಾಡಿದ್ದಾರೆ. ಕರ್ನಾಟಕವು ಮಹಿಳಾ ಉದ್ಯಮಿಗಳಿಗೆ ಅತ್ಯುತ್ತಮ ಅವಕಾಶಗಳನ್ನು ನೀಡುತ್ತದೆ ಎಂದು ಸಚಿವ ಮುರುಗೇಶ್ ನಿರಾಣಿ ‌ತಿಳಿಸಿದರು. ನಮ್ಮ ಸರ್ಕಾರವು ಕೈಗಾರಿಕೆಗಳನ್ನು ಉತ್ತೇಜಿಸಲು ಸಬ್ಸಿಡಿಗಳು ಮತ್ತು ಪ್ರೋತ್ಸಾಹಕಗಳನ್ನು ಒಳಗೊಂಡಂತೆ ಅನೇಕ ರಿಯಾಯಿತಿಗಳನ್ನು ನೀಡುತ್ತದೆ. ನಾವು ಮಹಿಳಾ ಉದ್ಯಮಿಗಳಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡಲು ಬದ್ಧರಾಗಿದ್ದೇವೆ ಎಂದು ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದರು. ‘ಟುಗೆದರ್ ವಿ ಗ್ರೋ ಕಾರ್ಯಕ್ರಮ’ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ, ಮಹಿಳಾ ಉದ್ಯಮಿಗಳ ಒಕ್ಕೂಟದ ಒಕ್ಕೂಟದ ಅಧ್ಯಕ್ಷರು ಇತ್ತೀಚೆಗೆ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಮಹಿಳಾ ಉದ್ಯಮಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದ್ದರು. ಅವರು ನವೆಂಬರ್ 18, 2021 ರಂದು ಅಂತಾರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದಂದು ಇಲ್ಲಿ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ‘ಟುಗೆದರ್ ವಿ ಗ್ರೋ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಹಿಳಾ ಉದ್ಯಮಿಗಳನ್ನು ಪೋಷಿಸಲು 30 ಕ್ಕೂ ಹೆಚ್ಚು ಸಂಘಗಳು ಮತ್ತು ಅವುಗಳ 13,000 ಸದಸ್ಯರನ್ನು ಸಂಪರ್ಕಿಸುವ ಗುರಿಯನ್ನು ಹೊಂದಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. : – – - – - -- . …. , , • ‘ ’ • 18 • • , 12: , ‘ ’ . ‘ ’ 18 . , , “ . . . ’ ,” . , . ‘ ’ 18, 2021 . 30 13,000 . . , , , , . 400 7 , , ‘ ’ . - , , . “ . . . ,” .