ಜತೆ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ ; ಟ್ಯಾಬ್ಲೆಟ್, ಸ್ಮಾರ್ಟ್ ಫೋನ್ ಮೂಲಕವೂ ಕಲಿಕೆಗೆ ಅವಕಾಶ ಬೆಂಗಳೂರು, ಅ.12, 2021 : (.. ) ಉದ್ಯಮರಂಗವು ನಿರೀಕ್ಷಿಸುವಂತಹ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮಹತ್ವಾಕಾಂಕ್ಷೆಯಿಂದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇಂದು ನಾಸ್ಕಾಂ (ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ವೇರ್ ಅಂಡ್ ಸರ್ವೀಸ್ ಕಂಪನೀಸ್) ಜೊತೆ ಒಡಂಬಡಿಕೆಗೆ ಸಹಿ ಹಾಕಿತು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಇದಕ್ಕೆ ಅಂಕಿತ ಹಾಕಲಾಯಿತು. ಬಳಿಕ ಮಾತನಾಡಿದ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದಿಷ್ಟು.. ಒಡಂಬಡಿಕೆಯು ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ಕಾಲೇಜು/ ವಿಶ್ವವಿದ್ಯಾಲಯಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಇದರಿಂದ ಪ್ರತೀವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಲಾಭವಾಗಲಿದೆ. ಈ ಉಪಕ್ರಮದಿಂದಾಗಿ ನಾಸ್ಕಾಂನ `ಫ್ಯೂಚರ್ ಸ್ಕಿಲ್ಸ್ ಪ್ರೈಮ್’ ವೇದಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಕೋರ್ಸುಗಳು ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಆನ್-ಲೈನ್ ಮೂಲಕ ಸುಲಭವಾಗಿ ಲಭ್ಯವಾಗಲಿವೆ. ಈ ಒಡಂಬಡಿಕೆಯಲ್ಲಿ ಗುಣಮಟ್ಟದಿಂದ ಕೂಡಿರುವ ಕೋರ್ಸುಗಳು, ಬೋಧಕ ಸಿಬ್ಬಂದಿಗೆ ತರಬೇತಿ ಮತ್ತು ಮೂಲಸೌಲಭ್ಯ ಸಂಪನ್ಮೂಲಗಳ ಅಭಿವೃದ್ಧಿಗೆ ಆದ್ಯ ಗಮನ ಕೊಡಲಾಗಿದೆ. ಮೂರು ವರ್ಷಕ್ಕೆ ಮೂರು ಕೋರ್ಸ್ ಈ ಒಡಂಬಡಿಕೆಯ ಫಲವಾಗಿ, ಕಂಪ್ಯೂಟರ್ ವಿಜ್ಞಾನವನ್ನು ಹೊರತುಪಡಿಸಿ ಬೇರೆ ವಿಭಾಗಗಳಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಪದವಿಯ ಮೊದಲನೇ ವರ್ಷದಲ್ಲಿ ಡಿಜಿಟಲ್ ಫ್ಲೂಯೆನ್ಸಿ, ಎರಡನೇ ವರ್ಷದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ಮೂರನೇ ವರ್ಷದಲ್ಲಿ ಸೈಬರ್ ಸೆಕ್ಯುರಿಟಿ ಕೋರ್ಸುಗಳು ಲಭ್ಯವಾಗಲಿದ್ದು, ಇವುಗಳ ಕಲಿಕೆ ಕಡ್ಡಾಯವಾಗಿದೆ. ಈ ಕೋರ್ಸುಗಳನ್ನು ಮೈಕ್ರೋಸಾಫ್ಟ್ ಮತ್ತು ಸಿಸ್ಕೋ ಕಂಪನಿಗಳು ರೂಪಿಸಿದ್ದು, ಇವುಗಳ ಮೂಲಕ ವಿದ್ಯಾರ್ಥಿಗಳಿಗೆ ಕೌಶಲ್ಯಗಳನ್ನು ಕಲಿಸಲಾಗುವುದು. ಇದನ್ನು ಕಲಿಯಲು ಯಾವುದೇ ಶುಲ್ಕದ ಹೊರೆ ಇರುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಬಳಿ ಇರುವ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಫೋನುಗಳ ಮೂಲಕವೂ ಈ ಆನ್-ಲೈನ್ ಕೋರ್ಸುಗಳನ್ನು ಸುಲಭವಾಗಿ ಕಲಿಯಬಹುದು. ನಾಸ್ಕಾಂನ ಈ ಕೋರ್ಸುಗಳು ಎನ್ಎಸ್ ಕ್ಯೂಎಫ್ (ನ್ಯಾಷನಲ್ ಸ್ಕಿಲ್ಸ್ ಕ್ವಾಲಿಫಿಕೇಶನ್ ಫ್ರೇಂವರ್ಕ್) ರೂಪಿಸಿರುವ ಗುಣಮಟ್ಟ ಮಾನದಂಡಗಳಿಗೆ ಅನುಗುಣವಾಗಿವೆ. ದೇಶದ ಐ.ಟಿ. ಸೇವಾ ವಲಯವು ಈಗ ವರ್ಷಕ್ಕೆ 150 ಶತಕೋಟಿ ಡಾಲರ್ ವಹಿವಾಟು ನಡೆಸುತ್ತಿದೆ. ಇದು 2025ರ ಹೊತ್ತಿಗೆ 350 ಶತಕೋಟಿ ಡಾಲರ್ ವಹಿವಾಟು ನಡೆಸುವ ಮಟ್ಟಕ್ಕೆ ಬೆಳೆಯಲಿದೆ. ಈಗ ರಾಷ್ಟ್ರದಲ್ಲಿರುವ ಡಿಜಿಟಲ್ ಪ್ರತಿಭಾವಂತರಿಗಿಂತ ಎಂಟು ಪಟ್ಟು ಹೆಚ್ಚಿನ ಬೇಡಿಕೆ ಇದ್ದು, 2024ರ ಹೊತ್ತಿಗೆ ಇದು 20 ಪಟ್ಟು ಹೆಚ್ಚಾಗಲಿದೆ. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿ, ಹೊಸ ಹೆಜ್ಜೆಗಳನ್ನು ಇಡಲಾಗುತ್ತಿದೆ. ನಾಸ್ಕಾಂ ಪರವಾಗಿ ನವನೀತ್ ಸಮೈಯಾರ್ ಮತ್ತು ದಿನೇಶ್ ಕುಮಾರ್ ಪಾಣಿಗ್ರಾಹಿ ಇದ್ದು, ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಶಿ, ಆಡಳಿತಾಧಿಕಾರಿ ಡಾ.ಟಿ.ಎನ್.ತಾಂಡವೇಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದರು. : – - – - : : - , () . () ... , / . , , 5 ( ) . “ ” , .“ , , . . “ ” (). /”, . , , , . - . , . , $300-350 2025, . 20 2024, . 2020 . , ..., -, , . , , . , , , , . 3 :‘ ’ , , , , ‘ ’ .‘ ’ .