ಬಿಎಸ್ ವೈ ಆಪ್ತರ ಮೇಲೆ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್. ಬೆಂಗಳೂರು,ಅಕ್ಟೋಬರ್,12,2021(..):ಬಿ.ಎಸ್ ಯಡಿಯೂರಪ್ಪ ಆಪ್ತರ ಮೇಲೆ ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸಬಾಂಬ್ ಸಿಡಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ ಐಟಿ ರೇಡ್‌ ಗೆ ಕಾರಣ. ಸಿದ್ದರಾಮಯ್ಯ ಪವರ್‌ ಗಾಗಿ ಏನು ಬೇಕಾದರೂ ಮಾಡುತ್ತಾರೆ. ಬಿಎಸ್ ಯಡಿಯೂರಪ್ಪ ಭೇಟಿ ಸಹ ಅದರ ಭಾಗವಾಗಿದೆ. ಹೇಗಾದರೂ ಸರಿ ಸಿದ್ದರಾಮಯ್ಯಗೆ ಅಧಿಕಾರ ಬೇಕು. ಈ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಅದಕ್ಕಾಗಿ ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐಟಿ ದಾಳಿ ನಡೆಸಿದ್ದಾರೆ. ಐಟಿ ದಾಳಿ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದೆ. ಇದರ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದು ಗಂಭೀರ ಆರೋಪ ಮಾಡಿದರು. ಸಿಂಧಗಿ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಅಲ್ಲಿ ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ಇಲ್ಲ. ಅಲ್ಲಿ ಕಾಂಗ್ರೆಸ್ ಯಾವಾಗಲೂ ಮೂರನೇ ಸ್ಥಾನದಲ್ಲಿದೆ. ಅಲ್ಲೇನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಪೈಪೋಟಿ. ನಾವು ಯೋಚನೆ ಮಾಡಿ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯಗೆ ಪಾಠ ಕಲಿಸಲು ಈ ಅಭ್ಯರ್ಥಿ ಹಾಕಿದ್ದೇವೆ. ಸಿದ್ದರಾಮಯ್ಯ ಯಾವ ದೊಣ್ಣೆನಾಯಕ ಅಂತಾ ಅವರು ಹೇಳಿದ ಅಭ್ಯರ್ಥಿ ಹಾಕಬೇಕು. ಎರಡು ಕ್ಷೇತ್ರದಲ್ಲಿ ಜೆಡಿಎಸ್ ಗಂಭೀರವಾಗಿ ಸ್ಪರ್ಧೆ ಮಾಡಲಿದೆ ಎಂದು ಹೆಚ್,ಡಿ ಕುಮಾರಸ್ವಾಮಿ ತಿಳಿಸಿದರು. : – – – -- - - … ’ : , 12, 2021 (..): .. .. ’ . . “ . . . . , . , ,” . , .. . “ . . . , . ? ? ,” .: .. / / ’ /