ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್. ನವದೆಹಲಿ,ಅಕ್ಟೋಬರ್,12,2021(..):ದೇಶದಲ್ಲಿ ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಡಿಸಿಜಿಐ ಅನುಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಅನುಮತಿ ಇಲ್ಲದ ಹಿನ್ನೆಲೆ ಸಾಕಷ್ಟು ಆತಂಕವಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡಲು ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತು ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. 2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಕೊವ್ಯಾಕ್ಸಿನ್ ಲಸಿಕೆ ಬಳಸಲು ಡಿಸಿಜಿಐ ಅನುಮತಿ ನೀಡಿದೆ. ಹಾಗೆಯೇ 20 ದಿನಗಳ ಅಂತರದಲ್ಲಿ 2 ಡೋಸ್ ಲಸಿಕೆ ನೀಡಬೇಕು ಎಂದು ತಿಳಿಸಿದೆ. : – - – .