ಕೆಪಿಟಿಸಿಎಲ್’ನಿಂದ ಗುಡ್ ನ್ಯೂಸ್! 1899 ಹುದ್ದೆ ನೇಮಕಾತಿ ಪ್ರಕ್ರಿಯೆ ಶುರು ಬೆಂಗಳೂರು, ಅಕ್ಟೋಬರ್ 12, 2021 (..):ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂಧನ ಸಚಿವ ವಿ. ಸುನಿಲ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ” ಎಂದು ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಸೋಮವಾರ ನೇಮಕಾತಿ ಆದೇಶ ಪತ್ರ ವಿತರಿಸಲಾಗಿದೆ. ಕೆಪಿಟಿಸಿಎಲ್‌ನ 1899 ಹುದ್ದೆಗಳಿಗೆ ಕಳೆದ 2019ರ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಈ ನೇಮಕಾತಿ ಪ್ರಕ್ರಿಯೆ ನಾನಾ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿತ್ತು. ಕೆಪಿಟಿಸಿಎಲ್‌ನಲ್ಲಿ ಖಾಲಿ ಇರುವ ಇತರ ಹುದ್ದೆಗಳ ಭರ್ತಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. : , 1899