ಅಕ್ಟೋಬರ್ 16ರವರೆಗೆ ಮೈಸೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ ಬೆಂಗಳೂರು, ಅಕ್ಟೋಬರ್ 12, 2021 (..):ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16ರವರೆಗೆ ಅತ್ಯಧಿಕ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. : 16 … , 16Bengaluru, 12, 2021 (..): 16, . , , , , , , , , , , , , , , , , , , .: / / 16