ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಹುತಾತ್ಮ. ಜಮ್ಮು ಮತ್ತು ಕಾಶ್ಮೀರ,ಅಕ್ಟೋಬರ್,11,2021(..):ಜಮ್ಮು ಮತ್ತು ಕಾಶ್ಮೀರದ ಪೊಂಚ್ ನಲ್ಲಿ ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಭಾರಿ ಗುಂಡಿನ ಕಾಳಗ ನಡೆದಿದ್ದು ಈ ವೇಳೆ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಇಂದು ಮತ್ತೆ ಜಮ್ಮು-ಕಾಶ್ಮೀರದಲ್ಲಿ ಗುಂಡಿನ ದಾಳಿ ಮುಂದುವರೆದಿದೆ. ಇಂದು ಬೆಳಗ್ಗೆಯಿಂದಲೂ ಕೂಡ ಉಗ್ರ ವಿರುದ್ದ ಕಾರ್ಯಚರಣೆಯನ್ನು ನಡೆಸಲಾಗುತ್ತಿದ್ದು, ಇದೇ ವೇಳೆ ಕಾರ್ಯಚರಣೆಯಲ್ಲಿ ಭಾರತದ ಯೋಧರ ಗುಂಡಿಗೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಬಾಕಿ ಉಳಿದಿರುವ ಉಗ್ರರದನ್ನು ಹೊಡೆದುರುಳಿಸಲು ಭಾರತೀಯ ಯೋಧರು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. : - – -- -