ಎಲ್ಲಾ ಹೊರ ಗುತ್ತಿಗೆ ನೌಕರರನ್ನ ಸೇವೆಯಿಂದ ಬಿಡುಗಡೆಗೊಳಿಸಿದ ಬೆಂಗಳೂರು ವಿವಿ. ಬೆಂಗಳೂರು,ಅಕ್ಟೋಬರ್,9,2021(..):ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೊರಗುತ್ತಿಗೆ ನೌಕರರುಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಸೇವೆಯಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಬೆಂಗಳೂರು ವಿವಿ ಕುಲಸಚಿವರು, ಉಲ್ಲೇಖಿತ (1)ರ ಸರ್ಕಾರದ ಪತ್ರದಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಪೂರ್ವಾನುಮೋದನೆ ಪಡೆಯದೆ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಅಧಿನಿಯಮ-2000 ದ ಪ್ರಕರಣ 56 ರ ಉಪಬಂಧಗಳು ಹಾಗೂ ರಾಜ್ಯ ಸರ್ಕಾರದ ಪ್ರಸಕ್ತ ನೇಮಕಾತಿ ಹಾಗೂ ಮೀಸಲಾತಿ, ಕಾರ್ಯನೀತಿ ನಿಯಮಗಳನ್ನು ಪಾಲಿಸದೆ ನಿಯಮಬಾಹಿರವಾಗಿ ಅರ್ಹತೆಯ ಮಾನದಂಡಗಳನ್ನು ಮೀರಿ ಮಂಜೂರಾದ ಹುದ್ದೆಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭರ್ತಿ ಮಾಡಿಕೊಂಡಿರುವ ಬೋಧಕ, ಬೋಧಕೇತರ ತಾತ್ಕಾಲಿಕ/ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಹೊಂದಿರುವ ಸಿಬ್ಬಂದಿಗಳು ಖಾಯಮಾತಿ ಹಾಗೂ ಇತರ ಸೌಲಭ್ಯಗಳಿಗಾಗಿ ಪದೇ ಪದೇ ನ್ಯಾಯಾಲಯದಲ್ಲಿ ರಿಟ್ ಅರ್ಜಿಗಳನ್ನು ದಾಖಲಿಸಿ ಸರ್ಕಾರದ ಅಮೂಲ್ಯ ಸಮಯವನ್ನು ವ್ಯರ್ಥಮಾಡುತ್ತಿರುವುದರಿಂದ, ಈ ಕೂಡಲೇ ಅಂತಹ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸುವಂತೆ ನಿರ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೊರಗುತ್ತಿಗೆ ನೌಕರರುಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಸೇವೆಯಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೊರಗುತ್ತಿಗೆ ನೌಕರರ ಸೇವೆಯನ್ನು ದಿನಾಂಕ 08.10.2021 ರ ಅಪರಾಹ್ನ ಬೆಂಗಳೂರು ವಿಶ್ವವಿದ್ಯಾಲಯದ ಹೊರಗುತ್ತಿಗೆ ಸೇವೆಯಿಂದ ಬಿಡುಗಡೆ ಗೊಳಿಸಲಾಗಿದೆ. ಹೊರಗುತ್ತಿಗೆ ನೌಕರರ ನೇಮಕದ ಬಗ್ಗೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಆದೇಶ ಪಡೆಯಲಾಗುವುದು. ಈ ಆದೇಶಕ್ಕೆ ವಿರುದ್ಧವಾಗಿ ಹೊರಗುತ್ತಿಗೆ ನೌಕರರನ್ನು ಮುಂದುವರೆಸಿದಲ್ಲಿ ಸಂಬಂಧಪಟ್ಟ ವಿಭಾಗ ಕಛೇರಿಗಳ ಅಧಿಕಾರಿಗಳು ಮುಖ್ಯಸ್ಥರು ಸಮನ್ವಯಾಧಿಕಾರಿಗಳು ನಿರ್ದೇಶಕರುಗಳೇ ಕಾನೂನಾತ್ಮಕ ಪರಿಣಾಮಗಳಿಗೆ ಹೊಣೆಗಾರರಾಗಬೇಕಾಗುತ್ತದೆ ಎಂದು ಕುಲಸಚಿವರು ಆದೇಶಿಸಿದ್ದಾರೆ. … , 9, 2021 (..): . . 56 , 2000, , . , , 08.10.2021 . : - - – –