ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಸೇರಿ ಇಬ್ಬರ ಬಂಧನ. ಬೆಂಗಳೂರು,ಅಕ್ಟೋಬರ್,8,2021(..):ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಸೇರಿ ಇಬ್ಬರನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜಿರಿಯಾ ಪ್ರಜೆ ಸೇರಿ ಇಬ್ಬರು ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಮಾಹಿತಿ ತಿಳಿದು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದು ಬಂಧಿತರಿಂದ 46 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಇನ್ನೊಂದೆಡೆ ಗಾಂಜಾ ಮಾರಾಟ ಮಾಡುತ್ತಿದ್ದ ದಿಲೀಪ್ ಅಲಿಯಾಸ್ ದಿಲಿ ಎಂಬಾತನನ್ನ ಪೀಣ್ಯಾ ಠಾಣಾ ಪೊಲೀಸರು ಬಂಧಿಸಿ 1 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಜಾಲಹಳ್ಳಿ ಕ್ರಾಸ್ ಬಸವೇಶ್ವರ ನಗರದ ಬಳಿ ಆರೋಪಿಯನ್ನ ಬಂಧಿಸಿದ್ದಾರೆ. : – –- -