ಚಾಮುಂಡೇಶ್ವರಿ ಬೆಟ್ಟದಲ್ಲಿ ನವರಾತ್ರಿ ಉತ್ಸವ: ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ. ಮೈಸೂರು,ಅಕ್ಟೋಬರ್,8,2021(..):ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಿದ್ದು ಚಾಮುಂಡೇಶ್ವರಿ ಬೆಟ್ಟದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 7 ರಿಂದ ಸಂಜೆ 6ವರಗೆ ಮಾತ್ರ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನವರಾತ್ರಿ ಅಂಗವಾಗಿ ವಿವಿಧ ಧಾರ್ಮಿಕ ಅಚರಣೆಗಳು ನಡೆಯಲಿದ್ದು, ಇಂದು ತಾಯಿ ಚಾಮುಂಡೇಶ್ವರಿ ದೇವಿಗೆ ಮಹೇಶ್ವರಿ ಆಲಂಕಾರ ಮಾಡಲಾಗುತ್ತದೆ. ಇದೇ ರೀತಿ ಪ್ರತಿ ದಿನವೂ ನಾಡಿನ ಅಧಿದೇವತೆ ವಿವಿಧ ಆಲಂಕಾರದಲ್ಲಿ ಕಂಗೊಳಿಸಲಿದ್ದು ಸಾರ್ವಜನಿಕರು ನೋಡಿ ಕಣ್ತುಂಬಿಕೊಳ್ಳಬಹುದು. ನಿನ್ನೆ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯಾಗಿದ್ದು ಈ ಹಿನ್ನೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. … : , 8, 2021 (..): . 7.00 6.00 . . ‘’ .: / / / : – - –