ಮನೆ ಕುಸಿದು 7 ಜನ ಮೃತಪಟ್ಟ ಪ್ರಕರಣ: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ: ಬದುಕುಳಿದ ವ್ಯಕ್ತಿಗೆ ಅಭಯ ನೀಡಿದ ಸಿಎಂ ಬೊಮ್ಮಾಯಿ. ಮೈಸೂರು,ಅಕ್ಟೋಬರ್,7,2021(..):ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮನೆ ಕುಸಿತದಿಂದ ಸಂಭವಿಸಿರುವ ಅನಾಹುತದಿಂದ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಮೃತಪಟ್ಟ ವ್ಯಕ್ತಿಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ. ಕೂಡಲೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಬದುಕುಳಿದ ವ್ಯಕ್ತಿಗೆ ಅಭಯ ನೀಡಿದ ಸಿಎಂ. ಬಡಾಲ ಅಂಕಲಗಿಯಲ್ಲಿ ಮನೆ ಬಿದ್ದು 7 ಜನ ಸಾವನ್ನಪ್ಪಿದ್ದು ಈ ದುರಂತದಲ್ಲಿ ಭೀಮಪ್ಪ ವ್ಯಕ್ತಿ ಬದುಕುಳಿದಿದ್ದಾರೆ. ಭೀಮಪ್ಪ ಸಾವನ್ನಪ್ಪಿರುವ ವ್ಯಕ್ತಿಗಳ ಕುಟುಂಬದ ಸದಸ್ಯರಾಗಿದ್ದು, ಭೀಮಪ್ಪನ ಜೊತೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರ ನಿನ್ನ ಜೊತೆಗಿರುತ್ತದೆ. ಮೃತಪಟ್ಟಿರುವವರ ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ತಕ್ಷಣವೇ ಪರಿಹಾರದ ಹಣವನ್ನು ತಲುಪಿಸಲಾಗುವುದು ಸರ್ಕಾರ ನಿನ್ನ ಜೊತೆ ಇರುತ್ತದೆ. ಯಾವುದೇ ಕಾರಣಕ್ಕೂ ದೃತಿಗೆಡಬೇಡ. ಎಂದು ಭೀಮಪ್ಪನಿಗೆ ಅಭಯ ನೀಡಿದರು. : -7 -- –-5 - – …. : . 5 , 7,2021 (..): , . . 5 . - . . . , . . “ . ’ , ,” .: / / / 7 /