ಮಾಜಿ ಸಿಎಂ ಬಿಎಸ್ ವೈ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ. ಬೆಂಗಳೂರು,ಅಕ್ಟೋಬರ್,7,2021(..):ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಉಮೇಶ್ ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು ಇಂದು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಭಾಷ್ಯಂ ಸರ್ಕಲ್‌ ನಲ್ಲಿರುವ ಬಿಎಸ್‌ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ ಆಪ್ತ ಸಹಾಯಕನ ರೀತಿ ರೀತಿ ಕೆಲಸ ಮಾಡುತ್ತಿದ್ದರು. ಬಿವೈ ರಾಘವೇಂದ್ರ ಬೆಂಗಳೂರಿಗೆ ಬಂದಾಗ ರಾಘವೇಂದ್ರ ಅವರ ಕೆಲಸಗಳ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ. ಮೊದಲು ಬಿಎಂಟಿಸಿ ನೌಕರರಾಗಿದ್ದ ಉಮೇಶ್ ನಂತರ 2008ರಲ್ಲಿ ಬಿಎಸ್ ವೈ ಅವರ ಪಿಎ ಆಗಿ ಕೆಲಸ ನಿರ್ವಹಿಸಿದ್ದರು. : - – - -