ಕಾರಿನ ಟೈರ್ ಬರ್ಸ್ಟ್ ಆಗಿ ತಾಯಿ, ಮಗ ಸ್ಥಳದಲ್ಲೇ ಸಾವು. ಮೈಸೂರು,ಅಕ್ಟೋಬರ್,6,2021(..):ಕಾರಿನ ಟೈರ್ ಬರ್ಸ್ಟ್ ಆಗಿ ಕಾರು ಅಪಘಾತ ಸಂಭವಿಸಿ ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ಈ ಘಟನೆ ನಡೆದಿದೆ. ದೈವಿಕ್ (12), ಗುಣಲಕ್ಷ್ಮಿ (35) ಮೃತಪಟ್ಟವರು. ಕಾರು ಚಾಲನೆ ಮಾಡುತ್ತಿದ್ದ ಪತಿ ಜಗದೀಶ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಂದು ಮುಂಜಾನೆ 4.30 ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನ‌ ಮುಂಭಾಗದ ಟೈರ್ ಗಳು ಬರ್ಸ್ಟ್ ಆಗಿ ಕಾರು ಕಂಬಕ್ಕೆ ಗುದ್ದಿ ಈ ಘಟನೆ ನಡೆದಿದೆ. ಈ ಕುರಿತು ಕುವೆಂಪು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : – - – - - -