ನಂಜನಗೂಡು ತಹಶೀಲ್ದಾರ್‌ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ. ಮೈಸೂರು,ಅಕ್ಟೋಬರ್,4,2021(..):ನಂಜನಗೂಡು ತಹಶಿಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್‌ ಮೋಹನ್ ಕುಮಾರಿ ಅವರನ್ನ ಸರ್ಕಾರ ವರ್ಗಾವಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ವರ್ಗಾವಣೆಯನ್ನ ಖಂಡಿಸಿ ನಂಜನಗೂಡಿನಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಾಲ್ಲಿ ಭಾಗಿಯಾದ ನೂರಾರು ಜನರು ಭಾಗಿಯಾಗಿದ್ದು ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು. : – - – – - -.