ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಬೆಂಗಳೂರು, ಅಕ್ಟೋಬರ್ 02, 2021 (..):ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಮತಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಲಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅದಕ್ಕೆ ಮುನ್ನುಡಿ ಎಂಬಂತೆ ಈ ನಿರ್ಧಾರ ಕೈಗೊಂಡಿದ್ದಾರೆ. ನಾಜಿಯಾ ಶಕೀಲಾ ಅಂಗಡಿ ಅವರು , . ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಅವರು ಕೋರಿದ್ದಾರೆ. : -