ಗಾಂಧೀಜಿ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು: ಸಚಿವ ಎಸ್.ಟಿ.ಸೋಮಶೇಖರ್ ಮೈಸೂರು, ಅಕ್ಟೋಬರ್ 02, 2021 (..):ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕು ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ನಗರದ ಗಾಂಧಿ ಸ್ಕ್ವೇರ್ ನಲ್ಲಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಗಾಂಧಿ ಜಯಂತಿ ಆಚರಿಸಲಾಗುತ್ತಿದೆ. ಅಹಿಂಸೆ ಮತ್ತು ಸತ್ಯದ ಹಾದಿಯಲ್ಲಿ ಹೋರಾಟ ಮಾಡಬಹುದು ಎಂದು ಜಗತ್ತಿಗೆ ತೋರಿಸಿಕೊಟ್ಟ ಮಹಾತ್ಮನನ್ನು ನೆನೆಯುವುದು ಮಾತ್ರವಲ್ಲ ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆಕೊಟ್ಟರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ನಾನಾ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರಾರ್ಥನಾ ಸಭೆಯಲ್ಲಿ ಭಾಗಿ ಗಾಂಧಿ ಜಯಂತಿ ಅಂಗವಾಗಿ ಟೌನ್‌ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಪ್ರಾರ್ಥನಾ ಸಭೆಯಲ್ಲಿ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು. : :