ಕೊರೊನಾ ಮೀಟರ್: ದೇಶದಲ್ಲಿ 24,354 ಹೊಸ ಕೊರೊನಾ ಪ್ರಕರಣ ದೃಢ ಬೆಂಗಳೂರು, ಅಕ್ಟೋಬರ್ 02, 2021 (..):ದೇಶದಲ್ಲಿ 24,354 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 234 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,37,91,061ಕ್ಕೆ ತಲುಪಿದ್ದು, 4,48,573ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,73,889ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ 25,455 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,30,68,599ಕ್ಕೆ ತಲುಪಿದೆ. ಭಾರತದಲ್ಲಿ ಒಂದೇ 14,29,258 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 57,19,94,990 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. : : 24,354