ಜೆಡಿಎಸ್ ಬಿಟ್ಟು ಬಿಜೆಪಿ ಸೇರುವುದಾಗಿ ಘೋಷಿಸಿದ ಸಂದೇಶ್ ನಾಗರಾಜ್ ಬೆಂಗಳೂರು, ಅಕ್ಟೋಬರ್,1,2021(..):ಜೆಡಿಎಸ್ ಬಿಟ್ಟು ಬಿಜೆಪಿ ಸೇರುವುದಾಗಿ ವಿಧಾನ ಪರಿಷತ್ ಸದಸ್ಯ, ಸಂದೇಶ್ ನಾಗರಾಜ್ ಘೋಷಿಸಿದ್ದಾರೆ. ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಸಂದೇಶ್ ನಾಗರಾಜ್ , ಜೆಡಿಎಸ್ ತೊರೆದು ನಾನು ಬಿಜೆಪಿ ಸೇರುತ್ತೇನೆ. ಜನವರಿ 5ರವರೆಗೆ ನಾನು ಜೆಡಿಎಸ್ ನಲ್ಲಿ ಇರುತ್ತೇನೆ, ಆ ಬಳಿಕ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿದ್ಧ ಸಂದೇಶ್ ನಾಗರಾಜ್ ಅವರು ಕಳೆದ ಒಂದೂವರೆ ವರ್ಷದಿಂದ ಜೆಡಿಎಸ್ ನಿಂದ ದೂರ ಉಳಿದಿದ್ದರು. : –- - – -