ಪಂಜಾಬ್ ಕಿಂಗ್ಸ್ ಬಿಗ್ ಲಾಸ್: ಐಪಿಎಲ್‌’ನಿಂದ ದೂರ ಸರಿಯುವ ನಿರ್ಧಾರ ಕೈಗೊಂಡ ಕ್ರಿಸ್ ಗೇಲ್ ಬೆಂಗಳೂರು, ಅಕ್ಟೋಬರ್ 1, 2021 (..):ಐಪಿಎಲ್‌ನ ಬಯೋ ಬಬಲ್ ಕಾರಣಕ್ಕೆ ಟೂರ್ನಿಯಿಂದ ಹಿಂದೆ ಸರಿಯಲು ಕ್ರಿಸ್ ಗೇಲ್ ನಿರ್ಧರಿಸಿದ್ದಾರೆ. ಪಂಜಾಬ್ ಕಿಂಗ್ಸ್ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಐಪಿಎಲ್‌ ಟೂರ್ನಿಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಕುರಿತು ಪಂಜಾಬ್ ಕಿಂಗ್ಸ್ ತಂಡ ಅಧಿಕೃತ ಘೋಷಣೆ ಮಾಡಿದ್ದಾರೆ. ಐಪಿಎಲ್ ಪುನರಾರಂಭದ ನಂತರ ಗೇಲ್ ತಂಡಕ್ಕಾಗಿ ಕೇವಲ ಎರಡು ಪಂದ್ಯಗಳನ್ನು ಆಡಿದ್ದರು. ಕ್ರಿಸ್ ಗೇಲ್ ಅವರ ನಿರ್ಧಾರವನ್ನು ತಂಡ ಗೌರವಿಸುತ್ತದೆ ಎಂದು ಮುಖ್ಯ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ. ನಾನು ಟಿ-20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್‌ಗೆ ಸಹಾಯ ಮಾಡುವತ್ತ ಗಮನ ಹರಿಸಲು ಬಯಸುತ್ತೇನೆ. ದುಬೈನಲ್ಲಿ ವಿರಾಮ ತೆಗೆದುಕೊಳ್ಳಲು ಬಯಸುತ್ತೇನೆ. ನನಗೆ ಸಮಯ ನೀಡಿದ ಪಂಜಾಬ್ ಕಿಂಗ್ಸ್‌ಗೆ ನನ್ನ ಧನ್ಯವಾದಗಳು ಎಂದು ಕ್ರಿಸ್ ಗೇಲ್ ತಿಳಿಸಿದ್ದಾರೆ. :