ಫ್ಲೇ ಆಫ್ ಆಸೆ ಉಳಿಸಿಕೊಳ್ಳಲು ಇಂದು ಕೊಲ್ಕತ್ತಾ ನೈಟ್ ರೈಡರ್ಸ್-ಪಂಜಾಬ್ ಕಿಂಗ್ಸ್’ಗೆ ಗೆಲುವು ಅನಿವಾರ್ಯ ಬೆಂಗಳೂರು, ಅಕ್ಟೋಬರ್ 1, 2021 (..):ಇಂದು ಐಪಿಎಲ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಹೋರಾಡಲಿದೆ. ಪ್ಲೇಆಫ್‌ ತಲುಪಲು ಮತ್ತಷ್ಟು ಹತ್ತಿರವಾಗಿಸಲು ಕೆಕೆಆರ್‌ ಸಿದ್ಧತೆ ನಡೆಸಿದ್ದು, ಪಂಜಾಬ್ ಕಿಂಗ್ಸ್ ಕೂಡ ಈ ಪಂದ್ಯವನ್ನು ಗೆದ್ದು ಪ್ಲೇಆಫ್‌ ಆಸೆ ಜೀವಂತವಾಗಿಟ್ಟುಕೊಳ್ಳುವ ವಿಶ್ವಾಸದಲ್ಲಿದೆ. ಭಾರತದಲ್ಲಿ ನಡೆದ ಮೊದಲ ಚರಣದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯುಎಇನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಪಂಜಾಬ್ ಕಿಂಗ್ಸ್ ಸಾಲು ಸಾಲು ಸಮಸ್ಯೆಗಳಿಂದ ಕೂಡಿದೆ. ಮಧ್ಯಮ ಕ್ರಮಾಂಕದ ಆಟಗಾರರಿಂದ ಉತ್ತಮ ಪ್ರದರ್ಶನ ಬಾರದಿರಿವುದು ಆರಂಭಿಕ ಆಟಗಾರರ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಿದೆ. ಆದರೆ ಪ್ಲೇಆಫ್ ಕನಸು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಗೆಲುವು ಅನಿವಾರ್ಯವಾಗಿದೆ. : -