60 ಕೋಟಿ ರೂ.ಮೌಲ್ಯದ ಆಸ್ತಿ ವಶಪಡಿಸಿಕೊಂಡ ಬಿಡಿಎ. ಬೆಂಗಳೂರು, ಅಕ್ಟೋಬರ್,1,2021(..):ಬಿಡಿಎಗೆ ಸೇರಿದ ಜಾಗವನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿರುವ ಬಿಡಿಎ ಅಧಿಕಾರಿಗಳು ಇಂದು ನಗರದ ಎಚ್ ಬಿಆರ್ ಬಡಾವಣೆಯಲ್ಲಿ ಸುಮಾರು 60 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಪಾಲಕ ಎಂಜಿನಿಯರ್ ಕುಮಾರ್ ನೇತೃತ್ವದ ಬಿಡಿಎ ಅಧಿಕಾರಿಗಳ ತಂಡವು ಈ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಿದ್ದು, ಎಚ್ ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಸರ್ವೆ ಸಂಖ್ಯೆ 194 ರ 1 ಎಕರೆ 23 ಗುಂಟೆ ಜಮೀನನ್ನು ವಶಕ್ಕೆ ಪಡೆದುಕೊಂಡಿದೆ. ಈ ಜಾಗವನ್ನು ಬಿಡಿಎ ಬಡಾವಣೆ ನಿರ್ಮಾಣ ಮಾಡುವ ಸಲುವಾಗಿ 1978 ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, 1985 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿತ್ತು. ಆದರೆ, ಭೂಮಾಲೀಕರು ಬಿಡಿಎ ವಿರುದ್ಧ ಹೈಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಬಿಡಿಎ ಪರ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಕೋರ್ಟಿನಲ್ಲಿ ದಾವೆ ಹೂಡಿದರಾದರೂ ಅರ್ಜಿಯನ್ನು ತಿರಸ್ಕರಿಸಿ ಸದರಿ ಜಮೀನನ್ನು ವಶಕ್ಕೆ ತೆಗೆದುಕೊಳ್ಳುವಂತೆ ಆದೇಶ ನೀಡಿತ್ತು. ತೀರ್ಪು ಬಂದು 30 ವರ್ಷವಾದರೂ ಸದರಿ ಜಮೀನಿನಲ್ಲಿ ಅನಧಿಕೃತವಾಗಿ ತಾತ್ಕಾಲಿಕ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಳ್ಳಲಾಗಿತ್ತು. ಬಿಡಿಎ ಅಧಿಕಾರಿಗಳು ಒಂದು ಕೈಗಾರಿಕಾ ಶೆಡ್, ಕಾರ್ಮಿಕರು ಉಳಿದುಕೊಳ್ಳಲು ನಿರ್ಮಾಣವಾಗಿದ್ದ 2 ಶೆಡ್ ಗಳನ್ನು ಹಾಗೂ ಕಾಂಪೌಂಡನ್ನು ನೆಲಸಮ ಮಾಡಿ ಸದರಿ ಜಾಗವನ್ನು ವಶಪಡಿಸಿಕೊಂಡಿದ್ದಾರೆ. ಈ ಜಾಗದ ಪ್ರಸ್ತುತ ಮಾರುಕಟ್ಟೆ ಮೌಲ್ಯ 60 ಕೋಟಿ ರೂಪಾಯಿಗಳು. ಬಿಡಿಎ ಅಧ್ಯಕ್ಷರ ಪ್ರತಿಕ್ರಿಯೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎಗೆ ಸೇರಬೇಕಾಗಿದ್ದ ಅಮೂಲ್ಯವಾದ ಆಸ್ತಿಗಳನ್ನು ಒತ್ತುವರಿದಾರರು ಮತ್ತು ಭೂಗಳ್ಳರು ಲಪಟಾಯಿಸುವ ಪ್ರಕರಣಗಳಿಗೆ ತಿಲಾಂಜಲಿ ಹಾಕಲು ಸಂಕಲ್ಪ ಮಾಡಿದ್ದೇವೆ. ಅದರಂತೆ, ನ್ಯಾಯಾಲಯದ ಸ್ಪಷ್ಟ ಆದೇಶಗಳನ್ನು ಪಡೆದುಕೊಂಡು ಪ್ರಾಧಿಕಾರ ತನ್ನ ವಶಕ್ಕೆ ತೆಗೆದುಕೊಳ್ಳುತ್ತದೆ. ಒತ್ತುವರಿದಾರರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರಿಂದ ಬಿಡಿಎ ಆಸ್ತಿಯನ್ನು ವಶಪಡಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. : - - - - 60 . … . 60 ., 1, 2021 (..): (), , . 60 ., . . , -, 23 . 194 . 1978 . 1985. , . ’ , . 30 . , 2 . . 60 ! .. , ’ .: / / / / / . 60