ಕೊರೊನಾ ಮೀಟರ್: ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಬೆಂಗಳೂರು, ಸೆಪ್ಟೆಂಬರ್ 30, 2021 (..):ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 23,529 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ದಿಢೀರ್ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,37,39,980 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 311 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 448062 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 277020 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 28718 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33014898 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 88,34,70,578 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. :