ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಸಂಕಷ್ಟಕ್ಕೆ ಸ್ಪಂದಿಸಿ ಹಣ ಬಿಡುಗಡೆ ಮಾಡಿಸಿದ ಸಂಸದ ಪ್ರತಾಪ್ ಸಿಂಹ ಮೈಸೂರು,ಸೆಪ್ಟಂಬರ್,29,2021(..):ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಸ್ಪಂದಿಸಿ ಚಿಕಿತ್ಸೆಗೆ ನೆರವಾಗಲು ಹಣ ಬಿಡುಗಡೆ ಮಾಡಿಸಿದ್ದಾರೆ. ಶಿವರಾಜು. ಎಂ, ವಯಸ್ಸು30, ಇವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮೈಸೂರಿನ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದರಿ ಕುಟುಂಬದವರು ಆರ್ಥಿಕವಾಗಿ ತೊಂದರೆಯಲ್ಲಿದ್ದು, ಚಿಕಿತ್ಸೆಗೆ ತಗಲುವ ವೆಚ್ಚವನ್ನು ಭರಿಸಲು ಸಾಧ್ಯವಾಗದ ಕಾರಣ, ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಅವರಲ್ಲಿ ಮೊರೆಹೊದರು. ಇದಕ್ಕೆ ಕೂಡಲೆ ಸ್ಪಂದಿಸಿದ ಸಂಸದರು ಅವರ ಚಿಕಿತ್ಸೆಗೆ ತಗಲುವ ಅಂದಾಜು ಮೊತ್ತ ರೂ.3,50,000/-ಗಳನ್ನು ಕೇಂದ್ರ ಸರ್ಕಾರದ ಡಾ. ಅಂಬೇಡ್ಕರ್ ಮೆಡಿಕಲ್ ಫೌಂಡೇಷನ್”ನ ವತಿಯಿಂದ ಬಿಡುಗಡೆ ಮಾಡಿಸಿದ್ದಾರೆ ಹಾಗೂ ಶಸ್ತ್ರ ಚಿಕಿತ್ಸೆಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ. : - – - –