ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ- ಸಚಿವ ಅಶ್ವಥ್ ನಾರಾಯಣ್ ಸ್ಪಷ್ಟನೆ. ಬೆಂಗಳೂರು,ಸೆಪ್ಟಂಬರ್,29,2021(..):ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಿಲ್ಲ. ಕೊರೊನಾ ಹಿನ್ನೆಲೆ ಶುಲ್ಕ ಹೆಚ್ಚಳ ಮಾಡಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ 20,000ಕ್ಕಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ. ಇತರೆ ಶುಲ್ಕಗಳ ಮಿತಿ 20 ಸಾವಿರ ರೂಪಾಯಿಗೆ ನಿಗದಿ ಮಾಡಲಾಗಿದೆ. ಹೆಚ್ಚುವರಿ ಶುಲ್ಕ ಪಡೆಯದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ನಿಗಾ ವಹಿಸಬೇಕು ಅಂತ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪಗೆ ಡಾ.ಅಶ್ವತ್ಥ್ ನಾರಾಯಣ ಜವಾಬ್ದಾರಿ ನೀಡಿದ್ದಾರೆ. ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ 20ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ನೀಡಿದ್ದವು. ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದೇನೆ. ಖಾಸಗಿ ಕಾಲೇಜುಗಳು ಈ ನಿರ್ಧಾರಕ್ಕೆ ಸಮ್ಮತಿ ಸೂಚಿಸಿವೆ. ಸ್ಕಿಲ್ ಟ್ರೈನಿಂಗ್ ಫೀಸ್ ತೆಗೆದುಕೊಳ್ಳುವುದು ಕಡ್ಡಾಯ ಅಲ್ಲ. ವಿಟಿಯು ಭೇಟಿ ನೀಡಿ ಒಪ್ಪಿಗೆ ಕೊಟ್ಟ ಬಳಿಕ ಶುಲ್ಕ ಪಡೆಯಬೇಕು. ವಿಟಿಯು ಒಪ್ಪಿಗೆ ಇಲ್ಲದೆ ಸ್ಕಿಲ್‌ ಫೀ ಸಂಗ್ರಹಿಸುವಂತಿಲ್ಲ ಎಂದು ತಿಳಿಸಿದ್ದಾರೆ. : –- – –- - - … : , 29, 2021 (..): . .. , - . , .20,000, . “ - () . ,” . 15-20%. “ , . . . ,” .: / . .. / / /