ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ಆರಂಭ- ಸಚಿವ ಅಶ್ವಥ್ ನಾರಾಯಣ್. ಬೆಂಗಳೂರು,ಸೆಪ್ಟಂಬರ್,29,2021(..):ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲೇ ಇಂಜಿನಿಯರಿಂಗ್ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಸಚಿವ ಅಶ್ವತ್ ನಾರಾಯಣ್, ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲಾಗುವುದು. ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ವಿಜಯಪುರದ ಬಿಎಲ್‌ಡಿಇ ಕಾಲೇಜು, ಎಸ್‌ ಜೆಆರ್ ಚಿಕ್ಕಬಳ್ಳಾಪುರ ಹಾಗೂ ಮೈಸೂರಿನ‌ ಮಹಾರಾಜ ಕಾಲೇಜಿನಲ್ಲಿ ಈ ವರ್ಷದಿಂದ ಆರಂಭವಾಗುತ್ತದೆ. ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ಕನ್ನಡದಲ್ಲೇ ಪಠ್ಯ ವಸ್ತು ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ವಿದ್ಯಾಭ್ಯಾಸ ಸಂಖ್ಯೆ‌ ಹೆಚ್ಚಾಗಲಿದೆ ಎಂದು ಸುದ್ದಿಗೋಷ್ಠಿ ನಡೆಸಿದೆ ಎಂದರು. : – - - – -- . ….