ಬೆಂಗಳೂರಿನಲ್ಲಿ ಶಿಥಿಲಗೊಂಡ ಕಟ್ಟಡಗಳ ತೆರವಿಗೆ ಸೂಚನೆ- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ. ಬೆಂಗಳೂರು,ಸೆಪ್ಟಂಬರ್,28,2021(..):ನಿನ್ನೆ ಲಕ್ಕಸಂದ್ರದಲ್ಲಿ ಮತ್ತು ಇಂದು ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರರ್ಸ್ ನಲ್ಲಿರುವ ಮೂರು ಅಂತಸ್ತಿನ ಕಟ್ಟಡ ಕುಸಿತವಾದ ಬೆನ್ನಲ್ಎಲ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ. ಶಿಥಿಲಗೊಂಡಿರುವ ಕಟ್ಟಡಗಳ ತೆರವಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಬೆಂಗಳೂರಿನಲ್ಲಿ ಶಿಥಿಲಗೊಂಡಿರುವ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ. ವಾಸಿಸಲು ಯೋಗ್ಯವಲ್ಲದ ಕಟ್ಟಡಗಳನ್ನ ಯಾರು ಬಾಡಿಗೆಗೆ ನೀಡಬಾರದು. ಒಂದೊಮ್ಮೆ ಕಟ್ಟಡದ ಬಗ್ಗೆ ನಿರ್ಲಕ್ಷ್ಯ ವಹಿಸಿದರೇ ಮಾಲೀಕರ ವಿರುದ್ಧ ಎಫ್ ಐಆರ್ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಮೂರು ಅಂತಸ್ತಿನ ಕಟ್ಟಡಗಳ ಕುಸಿತದ ಬಗ್ಗೆ ಮಾತನಾಡಿದ ಗೌರವ್ ಗುಪ್ತ, ಈ ಬಗ್ಗೆ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. : - - – -- – ,