ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್. ಬೆಂಗಳೂರು,ಸೆಪ್ಟಂಬರ್,28,2021(..):ರಾಜ್ಯದ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಎರಡು ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು ನವೆಂಬರ್ 2 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 1 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು ಅಕ್ಟೋಬರ್ 8 ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಎಂ.ಸಿ ಮನಗೋಳಿ ನಿಧನದಿಂದ ತೆರವಾಗಿರುವ ಸಿಂದಗಿ ಕ್ಷೇತ್ರ, ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. : – - –- - 30. … , 28, 2021 (..): . . , 30, 2. 1, 8. .. .. .: / / 30/