ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆಗೆ ಹಾಜರಾಗುವಂತೆ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್. ಬೆಂಗಳೂರು,ಜೂನ್,17,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟ ಚಿಕ್ಕಣ್ಣಗೂ ಸಂಕಷ್ಟ ಎದುರಾಗಿದೆ. ಇಂದೇ ವಿಚಾರಣೆಗೆ ಹಾಜರಾಗುಂತೆ ಹಾಸ್ಯ ನಟ ಚಿಕ್ಕಣ್ಣಗೆ ಪಶ್ಚಿಮ ವಿಭಾಗದ ಪೊಲೀಸರು ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು. ಕೊಲೆ ನಡೆದ ಜೂನ್‌ 8 ಶನಿವಾರದಂದು ನಟ ದರ್ಶನ್‌ ಆರ್‌ಆರ್‌ ನಗರದ ಸ್ಟೋನಿಬ್ರೂಕ್‌ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಕೊಲೆಗೂ ಮುನ್ನ ಈ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಹಾಸ್ಯನಟ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈಗ ತುರ್ತು ವಿಚಾರಣೆಗೆ ಹಾಜರಾಗುವಂತೆ ಚಿಕ್ಕಣ್ಣಗೆ ನೋಟಿಸ್ ನೀಡಿದ್ದಾರೆ. ನಟ ಚಿಕ್ಕಣ್ಣರನ್ನ ಸಾಕ್ಷಿಯಾಗಿ ಪರಿಗಣಿಸುವ ಸಾಧ್ಯತೆ ಇದೆ. : , , , ,