ನಟ ದರ್ಶ‍ನ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ: ವಿಚಾರಣೆ ಮುಂದೂಡಿಕೆ ಬೆಂಗಳೂರು,ಸೆಪ್ಟಂಬರ್,27,2024 (..):ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ 2ನೇ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಪ್ರಕರಣ ಸಂಬಂಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ನಟ ದರ್ಶನ್ ಜಾಮೀನು ಕೋರಿ 57ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಂದು ನಟ ದರ್ಶನ್ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ. ಈ ಮಧ್ಯೆ ವಾದ ಮಂಡನೆಗೆ ಕಾಲಾವಕಾಶ ನೀಡುವಂತೆ ನಟ ದರ್ಶನ್ ಪರ ವಕೀಲ ಸುನೀಲ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ವಕೀಲ ಸುನೀಲ್ ಮನವಿ ಮೇರೆಗೆ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 30‍ಕ್ಕೆ ಮೂಂದೂಡಿಕೆ ಮಾಡಿದೆ. : , , , , ,