ಕೊರೊನಾ ಮೀಟರ್: ಮತ್ತೆ ಸೋಂಕಿತರ ಸಂಖ್ಯೆ ಕೊಂಚ ಏರಿಕೆ ಬೆಂಗಳೂರು, ಸೆಪ್ಟೆಂಬರ್ 26, 2021 (..):ದೇಶದಲ್ಲಿ 28,326 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, 260 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,36,52,745 ಕ್ಕೆ ತಲುಪಿದ್ದು. ಸಾವಿನ ಸಂಖ್ಯೆ 4,46,918ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,03,476ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 26,032 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,29,02,351ಕ್ಕೆ ತಲುಪಿದೆ. ಇನ್ನು ಕೇಂದ್ರದ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 85,60,81,527 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ. : ’ :