ನಾಳೆ ಭಾರತ್ ಬಂದ್: ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ; ಸಿಎಂ ಮನವಿ ಬೆಂಗಳೂರು, ಸೆಪ್ಟೆಂಬರ್ 26, 2021 (..):ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ಕೇಂದ್ರದ ಕೃಷಿ ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಈ ಸಂಬಂಧ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ರೈತ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿದೆ. ಕೋವಿಡ್ ನಿಂದ ಜನರು, ರೈತರು ಸಮಸ್ಯೆ ಅನುಭವಿಸಿದ್ದಾರೆ. ಹೀಗಾಗಿ ಬಂದ್ ಹೆಸರಲ್ಲಿ ಜನ ಸಾಮಾನ್ಯರಿಗೆ ತೊಂದರೆ ಕೊಡುವುದು ಬೇಡ ಎಂದು ತಿಳಿಸಿದ್ದಾರೆ. 2019-20ರಲ್ಲಿ ಪ್ರವಾಹದಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿವೆ. ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ಕೆಲಸ ಮಾಡುತ್ತಿದೆ. ಈಗಾಗಲೇ ಪರಿಹಾರ ಕಾರ್ಯ ಆರಂಭವಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. : , ’