ಕೋವಿಡ್ ನಿಂದ ಬಲಿಯಾದವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಸರ್ಕಾರದಿಂದ ಅಧಿಕೃತ ಆದೇಶ. ಬೆಂಗಳೂರು,ಸೆಪ್ಟಂಬರ್,25,2021(..):ಕೋವಿಡ್ ಗೆ ಬಲಿಯಾದವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ನಿಂದ ಬಲಿಯಾದವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಿಪಿಎಲ್ ಕುಟಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ 1 ರೂ ಲಕ್ಷ ಪರಿಹಾರವನ್ನು ಅರ್ಹ ಸಂತ್ರಸ್ತ ಕುಟುಂಬದ ವಾರಸುದಾರರಿಗೆ ನೀಡಲು ಸರ್ಕಾರ ಆದೇಶಿಸಿದೆ. ಡಿಸಿಗಳ ಪಿಡಿ ಖಾತೆಯಿಂದ ಪರಿಹಾರ ವಿತರಿಸುವಂತೆ ಸೂಚನೆ ನೀಡಲಾಗಿದೆ. ಪಿಡಿ ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನ ಬಳಸಿಕೊಳ್ಳಬೇಕು. ಪಿಡಿ ಖಾತೆಯಿಂದ ಪರಿಹಾರ ನೀಡಬೇಕು. ಪರಿಹಾರ ನೀಡುವಲ್ಲಿ ಲೋಪಗಳಾದರೇ ಜಿಲ್ಲಾಧಿಕಾರಿಗಳೇ ಹೊಣೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. : 1lakh – – – - – . … . . 1 , 25, 2021 (..): . 1 -19 . .: . 1 / / / -19