ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್ ಬೆಂಗಳೂರು,ಜೂನ್,15,2024 (..):ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ನಟ ದರ್ಶನ್ ಸೇರಿ ಆರೋಪಿಗಳನ್ನ ಕೋರ್ಟ್ ಗೆ ಹಾಜರುಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಮತ್ತು ಪವಿತ್ರಾಗೌಡ ಸೇರಿ 13 ಆರೋಪಿಗಳನ್ನ ಜೂನ್ 20 ರವರೆಗೆ ಅಂದರೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಆರೋಪಿಗಳಾದ ನಟ ದರ್ಶನ್ , ಪವಿತ್ರಾಗೌಡ, ಪವನ್, ರಾಘವೇಂದ್ರ, ನಂದೀಶ, ಜಗದೀಶ್ , ಅನುಕುಮಾರ, ವಿನಯ್ , ಲಕ್ಷ್ಮಣ್ , ದೀಪಕ್, ಪ್ರದೋಶ್ ಸೇರಿ 13 ಆರೋಪಿಗಳನ್ನ ಕಸ್ಟಡಿಗೆ ನೀಡಲಾಗಿದೆ ಎನ್ನಲಾಗಿದೆ. : 13 , , ,